ಅಭಿನಯ ಶಾರದೆ ಜಯಂತಿ, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಅಸ್ತಮಾದಿಂದ ಬಳಲುತ್ತಿರುವ ಜಯಂತಿ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಹೀಗಿರುವಾಗಲೇ ಜಯಂತಿ ಅವರ ನಿಧನದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆಲವು ಕಲಾವಿದರು ಕೂಡಾ ಜಯಂತಿ ಅವರ ಸಾವಿಗೆ ಸಂತಾಪ ಸೂಚಿಸಿದ್ದು, ಶಾಸಕ ಸುರೇಶ್ ಕುಮಾರ್, ಕೆಲವು ಪತ್ರಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಅರ್ಪಿಸಿದ್ದು ವದಂತಿ ಜೋರಾಗಲು ಕಾರಣವಾಯ್ತು.
ಅತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಜಯಂತಿ ಅವರನ್ನು ನೋಡಿಕೊಳ್ಳುತ್ತಿರುವ ಅವರ ಪುತ್ರ ಕೃಷ್ಣಕುಮಾರ್, ವದಂತಿಗಳನ್ನು ಹಬ್ಬಿಸಬೇಡಿ ಎಂದು ಪ್ರಾರ್ಥಿಸಿದ್ದಾರೆ.