ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವಾಗಿರುವ ದಿ ವಿಲನ್ ಚಿತ್ರದ ಆಡಿಯೋ ರಿಲೀಸ್, ದುಬೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ದುಬೈನಲ್ಲಿ ಅಡಿಯೋ ಬಿಡುಗಡೆ ಮಾಡಿದ ಮೊದಲ ಕನ್ನಡ ಸಿನಿಮಾ ದಿ ವಿಲನ್ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ ನಿರ್ದೇಶಕ ಪ್ರೇಮ್. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಆಡಿಯೋ ರಿಲೀಸ್ ಮಾಡಿದ್ದ ಚಿತ್ರತಂಡ, ದುಬೈನಲ್ಲಿಯೂ ಆಡಿಯೋ ರಿಲೀಸ್ ಮಾಡುವ ಮೂಲಕ ಅದ್ಧೂರಿ ಪ್ರಚಾರ ಆರಂಭಿಸಿದೆ.
ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮಕ್ಕೆ ಬರಲಾಗುತ್ತಿಲ್ಲ ಎಂದು ತಿಳಿಸಿದ್ದ ನಾಯಕ ಕಿಚ್ಚ ಸುದೀಪ್, ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಶಿವರಾಜ್ಕುಮಾರ್, ಅಂಬರೀಷ್, ಅರ್ಜುನ್ ಜನ್ಯಾ, ನಾಯಕಿ ನಟಿ ಆ್ಯಮಿ ಜಾಕ್ಸನ್ ಹಾಗೂ ನಿರ್ಮಾಪಕ ಸಿ.ಆರ್. ಮನೋಹರ್ ಆಡಿಯೋ ರಿಲೀಸ್ನಲ್ಲಿ ಭಾಗವಹಿಸಿದ್ದರು. ಸೆಪ್ಟೆಂಬರ್ ಕೊನೆಯಲ್ಲಿ ಚಿತ್ರ ಬಿಡುಗಡೆಯಾಗುವ ನಿರೀಕ್ಷೆ ಇದೆ.