` sathyajith - chitraloka.com | Kannada Movie News, Reviews | Image

sathyajith

  • ಪೋಷಕ ನಟ ಸತ್ಯಜಿತ್ ನಿಧನ

    sathyajith image

    ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಸತ್ಯಜಿತ್ ನಿಧನರಾಗಿದ್ದಾರೆ. ಇಂದು ರಾತ್ರಿ 2  ಘಂಟೆಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಸತ್ಯಜಿತ್ ಅವರ ಮೂಲ ಹೆಸರು ಸಯ್ಯದ್ ನಿಜಾಮುದ್ದೀನ್. 650ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿರೋ ಸತ್ಯಜಿತ್‌ ಒಂದು ಕಾಲದಲ್ಲಿ ಬಹುಬೇಡಿಕೆ ಪೋಷಕ ನಟನಾಗಿದ್ದರು. ಸತ್ಯಜಿತ್‌ ವಿಲನ್ ಹಾಗೂ ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. ಪುಟ್ನಂಜ, ಶಿವ ಮೆಚ್ಚಿದ ಕಣ್ಣಪ್ಪ, ಅಪ್ಪು, ಚೈತ್ರದ ಪ್ರೇಮಾಂಜಲಿ, ಆಪ್ತಮಿತ್ರ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದರು. 

    ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕೆಲ ವರ್ಷಗಳ ಹಿಂದೆ ಗ್ಯಾಂಗ್ರಿನ್ ಆಗಿದ್ದ ಕಾರಣ ಅವರ ಒಂದು ಕಾಲನ್ನು ಕಳೆದುಕೊಂಡಿದ್ದರು.   ಹೃದಯಾಘಾತವೂ ಆಗಿತ್ತು.

    ಇಂದು ಮಧ್ಯಾಹ್ನ ಮುಸ್ಲಿಂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಲಿದೆ.

    ಮದ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ.