` ನಟ ದರ್ಶನ್ ಆಸ್ಪತ್ರೆಗೆ ದಾಖಲು - Exclusive - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
darshan admitted in mysore hospiatal
Darshan

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರಿನಲ್ಲಿದ್ದ ನಟ ದರ್ಶನ್ ಅವರಿಗೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಮೈಸೂರಿನ ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಗ್ಯಾಸ್ಟ್ರಿಕ್ ಸಮಸ್ಯೆಯೇ ಹೊಟ್ಟೆನೋವಿಗೆ ಕಾರಣ ಎನ್ನಲಾಗಿದೆ. ಅನಾರೋಗ್ಯ ಪರಿಶೀಲಿಸಿ ಪ್ರಥಮ ಚಿಕಿತ್ಸೆ ಪಡೆದುಕೊಂಡ ದರ್ಶನ್ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎನ್ನಲಾಗಿದೆ. ವೈದ್ಯರು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.