ಚಿರಂಜೀವಿ ಸರ್ಜಾ ಮತ್ತು ಚೇತನ್ ರಣಂ ಚಿತ್ರದಲ್ಲಿ ಒಟ್ಟಿಗೇ ನಟಿಸುತ್ತಿದ್ದಾರೆ. ವಿ ಸಮುದ್ರ ನಿರ್ದೇಶನದ ಈ ಚಿತ್ರದಲ್ಲಿ, ಚೇತನ್ ಕ್ರಾಂತಿಕಾರಿಯ ಪಾತ್ರ ಮಾಡುತ್ತಿದ್ದಾರೆ. ಅದೂ ಚೆಗವೇರಾ ಮಾದರಿಯ ಕ್ರಾಂತಿಕಾರಿ.
ಈಗ ಆ ಚಿತ್ರಕ್ಕೆ ಚಿರಂಜೀವಿ ಸರ್ಜಾ ಪ್ರವೇಶವಾಗಿದೆ. ಚಿರು, ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡುತ್ತಿದ್ದಾರಂತೆ. ಚೇತನ್ ಇರುವ ದೃಶ್ಯಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಚಿರಂಜೀವಿ ಸರ್ಜಾ ಅಭಿನಯದ ದೃಶ್ಯಗಳ ಚಿತ್ರೀಕರಣ ಬಾಕಿ ಇದೆ. ಚಿರು, 20 ದಿನಗಳ ಕಾಲ್‍ಶೀಟ್ ಕೊಟ್ಟಿದ್ದಾರೆ.