ದರ್ಶನ್ ಅಭಿನಯದ 50ನೇ ಚಿತ್ರ ಮುನಿರತ್ನ ಕುರುಕ್ಷೇತ್ರ ಚಿತ್ರ, ಸೆಟ್ಟೇರುವ ಮೊದಲೇ ಅಪಾರ ನಿರೀಕ್ಷೆ ಹುಟ್ಟಿಸುತ್ತಿದೆ. ಈಗ ಚಿತ್ರದ ಅತ್ಯಂತ ಪ್ರಮುಖ ಪಾತ್ರಕ್ಕೆ ಆರ್ಮುಗಂ ಖ್ಯಾತಿಯ ರವಿಶಂಕರ್ ಸೇರ್ಪಡೆಯಾಗಿದ್ದಾರೆ. ರವಿಶಂಕರ್ಗೆ ಕುರುಕ್ಷೇತ್ರ ಚಿತ್ರದಲ್ಲಿ ಶಕುನಿಯ ಪಾತ್ರ.
ಕುರುಕ್ಷೇತ್ರ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿರುವುದೇ ನನ್ನ ಅದೃಷ್ಟ. ನಾನಂತೂ ಎಕ್ಸೈಟ್ ಆಗಿದ್ದೇನೆ ಎಂದಿದ್ದಾರೆ ರವಿಶಂಕರ್. ಅವರ ಎಕ್ಸೈಟ್ಮೆಂಟ್ಗೆ ಕಾರಣವೂ ಇದೆ. ಏಕೆಂದರೆ ಕುರುಕ್ಷೇತ್ರಕ್ಕೆ ಕಾರಣಕರ್ತನೇ ಶಕುನಿ. ಮಹಾಭಾರತದ ಅತ್ಯಂತ ಪ್ರಮುಖ ಪಾತ್ರವದು.
ಇನ್ನು ಧೃತರಾಷ್ಟ್ರನ ಪಾತ್ರದಲ್ಲಿ ನಟಿಸುತ್ತಿರುವ ಶ್ರೀನಾಥ್ಗೂ ಅಂಥದ್ದೇ ಉತ್ಸಾಹ. ಶ್ರೀನಾಥ್ಗೆ ಪೌರಾಣಿಕ ಚಿತ್ರ ಮತ್ತು ಪಾತ್ರಗಳು ಹೊಸದಲ್ಲ. ಈ ಹಿಂದೆ ಅಣ್ಣಾವ್ರ ಜೊತೆ ನಾಲ್ಕು ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದೆ. ಈಗ ಮತ್ತೆ ಅಂಥಾದ್ದೊಂದು ಅದ್ಭುತ ಅವಕಾಶ ಸಿಕ್ಕಿದೆ. ಹಳೆಯದೆಲ್ಲ ನೆನಪಾಗುತ್ತಿದೆ. ಅಭಿನಯಿಸಲು ಕಾತುರನಾಗಿದ್ದೇನೆ ಎಂದಿದ್ದಾರೆ ಶ್ರೀನಾಥ್.
Related Articles :-
ಮುನಿರತ್ನ ಕುರುಕ್ಷೇತ್ರದ ಮುಹೂರ್ತಕ್ಕೆ ಡಿಕೆ ತಲೆನೋವು
ಕುರುಕ್ಷೇತ್ರದ ಮುಹೂರ್ತಕ್ಕೆ ಆಹ್ವಾನ. ಹೇಗಿದ್ದಾರೆ ಗೊತ್ತಾ ದರ್ಶನ್..?
ಕುರುಕ್ಷೇತ್ರದಲ್ಲಿ ದರ್ಶನ್ ಜೊತೆ ನಟಿಸುತ್ತಿಲ್ಲ - ಕಾರಣ ಹೇಳಿದ ಶಿವರಾಜ್ ಕುಮಾರ್
ಕುರುಕ್ಷೇತ್ರ ಚಿತ್ರದ ಮುಹೂರ್ತ ಮುಂದೆ ಹೋಯ್ತು..!
ದುರ್ಯೋಧನ ದರ್ಶನ್ಗೆ ಸಿಕ್ಕನಾ ಭೀಮ..? - ಬಾಲಿವುಡ್ ಆಂಜನೇಯ ಕುರುಕ್ಷೇತ್ರದ ಭೀಮ?
Kurukshetra To be Launched on July 30th