ಶಿವರಾಜ್‍ಕುಮಾರ್ ಮತ್ತು ಗೀತಾ ದಂಪತಿ, ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಆದರೆ, ತಮ್ಮ ಭೇಟಿಗೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕುಮಾರಸ್ವಾಮಿ, ರಾಜಕೀಯದ ಹೊರತಾಗಿಯೂ ನಮ್ಮ ಕುಟುಂಬದ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಭೇಟಿ ಮಾಡಿದೆವು ಎಂದು ತಿಳಿಸಿದ್ದಾರೆ ಶಿವರಾಜ್‍ಕುಮಾರ್.
ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮಗಿದೆ. ಕುಮಾರಸ್ವಾಮಿ ಒಳ್ಳೆಯ ಆಡಳಿತ ನೀಡಲಿದ್ದಾರೆ ಎಂದು ಶಿವರಾಜ್ ಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.