ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದೆ. ರಾಕಿಂಗ್ ಸ್ಟಾರ್ ಯಶ್, ತಮ್ಮ ಪಾತ್ರಕ್ಕೆ ಡಬ್ಬಿಂಗ್ ಶುರು ಮಾಡಿದ್ದಾರೆ. ಹಾಗೆಂದು ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿಲ್ಲ. ಇನ್ನೂ ಒಂದು ಹಾಡಿನ ಚಿತ್ರೀಕರಣ ಬಾಕಿ ಇದೆ. ಹಾಡಿಗೆ ಎಲ್ಲ ಪ್ಲಾನ್ ಮಾಡಿಕೊಂಡಿರುವ ಚಿತ್ರತಂಡ, ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಕೈ ಹಾಕಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರಕ್ಕೆ ಶ್ರೀನಿಧಿ ಶೆಟ್ಟಿ ನಾಯಕಿ. ಅನಂತ್ ನಾಗ್, ಮಾಳವಿಕ ಸೇರಿದಂತೆ ಘಟಾನುಘಟಿಗಳ ತಂಡವೇ ಚಿತ್ರತಂಡದಲ್ಲಿದೆ. ಹೊಂಬಾಳೆ ಪ್ರೊಡಕ್ಷನ್ಸ್‍ನಲ್ಲಿ ಬರುತ್ತಿರುವ ಸಿನಿಮಾಗೆ ವಿಜಯ್ ಕಿರಗಂದೂರು, ಕಾರ್ತಿಕ್ ಗೌಡ ನಿರ್ಮಾಪಕರು.