ಪುನೀತ್ ರಾಜ್‍ಕುಮಾರ್ ಅಭಿನಯದ ನಟಸಾರ್ವಭೌಮ ಸಿನಿಮಾದ ರಿಲೀಸ್‍ಗೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 5ಕ್ಕೆ ಚಿತ್ರದ ಬಿಡುಗಡೆ. ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರವಾಗಿರುವ ಕಾರಣ, ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುವ ಸಾಧ್ಯತೆ ಇಲ್ಲ. ಪವನ್ ಒಡೆಯರ್ ನಿರ್ದೇಶನದ ಚಿತ್ರದ ಚಿತ್ರೀಕರಣ ಕಡೆಯ ಹಂತದಲ್ಲಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸವೂ ಏಕಕಾಲದಲ್ಲಿ ನಡೆಯುತ್ತಿದೆ.
ಬಾಗಲಕೋಟೆಯಲ್ಲಿ ಪುಷ್ಕರಣಿ ಬಳಿಯ ಶೂಟಿಂಗ್ ವಿವಾದವೂ ಶಾಂತಿಯುತವಾಗಿ ಬಗೆಹರಿದಿದ್ದು, ಚಿತ್ರದ ಚಿತ್ರೀಕರಣ ಮುಗಿದಿದೆ. ರಚಿತಾರಾಮ್ ನಾಯಕಿಯಾಗಿರುವ ಸಿನಿಮಾದಲ್ಲಿ ಹಿರಿಯ ನಟಿ ಬಿ.ಸರೋಜಾದೇವಿ ನಟಿಸುತ್ತಿರುವುದು ವಿಶೇಷ. ಡಿ.ಇಮಾನ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.