ತಾಯಿಗೆ ತಕ್ಕ ಮಗ. ಶಶಾಂಕ್ ನಿರ್ದೇಶನ, ನಿರ್ಮಾಣದ ಸಿನಿಮಾ. ಕೃಷ್ಣನ್ ಲವ್ ಸ್ಟೋರಿ ಮತ್ತು ಕೃಷ್ಣ ಲೀಲಾ ನಂತರ ಅಜೇಯ್ ರಾವ್ ಮತ್ತು ಶಶಾಂಕ್ ಮತ್ತೊಮ್ಮೆ ಜೊತೆಯಾಗಿರುವ ಸಿನಿಮಾ. ಚಿತ್ರದ ಪ್ರಮುಖ ತಾಯಿಯ ಪಾತ್ರದಲ್ಲಿರೋದು ಸುಮಲತಾ. ಮೊದಲೇ ಅಣ್ಣಾವ್ರ ಹಳೆಯ ಸೂಪರ್ ಹಿಟ್ ಚಿತ್ರದ ಟೈಟಲ್. ಹೀಗೆ ಹಲವು ನಿರೀಕ್ಷೆ ಹುಟ್ಟಿಸಿರುವ ಸಿನಿಮಾಗೆ ಈಗ ಇನ್ನೊಂದು ಪವರ್ ಕೊಟ್ಟಿದ್ದಾರೆ ಕಿಚ್ಚ ಸುದೀಪ್.
ತಾಯಿಗೆ ತಕ್ಕ ಮಗ ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿದ್ದಾರೆ ಸುದೀಪ್. ಆಶಿಕಾ ರಂಗನಾಥ್ ಚಿತ್ರದ ನಾಯಕಿ. ಆಗಸ್ಟ್ 31ಕ್ಕೆ ಚಿತ್ರದ ಟ್ರೈಲರ್ ರಿಲೀಸ್ ಆಗಲಿದ್ದು, ಅದಕ್ಕೊಂದು ಟೀಸರ್ ಕೂಡಾ ರಿಲೀಸ್ ಮಾಡಿದ್ದಾರೆ ಶಶಾಂಕ್.