sಸೂಪರ್‍ಸ್ಟಾರ್ ರಜನಿಕಾಂತ್ ಅಭಿನಯದ 2.0 ಚಿತ್ರದ ಟ್ರೇಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ರಜನಿಕಾಂತ್, ಅಕ್ಷಯ್ ಕುಮಾರ್, ಆ್ಯಮಿ ಜಾಕ್ಸನ್ ಅಭಿನಯದ ಚಿತ್ರಕ್ಕೆ ಸ್ಟಾರ್ ಡೈರೆಕ್ಟರ್ ಶಂಕರ್ ನಿರ್ದೇಶನವಿದೆ. ಈ ಸಿನಿಮಾಗೆ ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಶುಭ ಹಾರೈಸಿದ್ದು ವಿಶೇಷವಾಗಿತ್ತು.
ನಿದೇಶಕ ಶಂಕರ್, ಉಪೇಂದ್ರ ಅವರ ಎ ಚಿತ್ರದಿಂದ ಸ್ಫೂರ್ತಿ ಪಡೆದಿದ್ದೇನೆ ಎಂದು ಹೇಳಿಕೊಂಡರೆ, ಶಿವಣ್ಣ ರಜನಿ ಚಿತ್ರಕ್ಕೆ ಕಾಯುತ್ತಿದ್ದೇನೆ ಎಂದು ಹೇಳಿಕೊಂಡರು.