ಕನ್ನಡದಲ್ಲೀಗ ಬಹುಭಾಷಾ ಸಿನಿಮಾಗಳು ಹೊಸದೇನೂ ಅಲ್ಲ. ಆದರೀಗ ಕಿಚ್ಚ ಸುದೀಪ್, ಬಹುಭಾಷೆಯಲ್ಲೂ ದಾಖಲೆ ಬರೆಯಲು ಸಿದ್ಧರಾಗಿದ್ದಾರೆ. ಕಿಚ್ಚ ಸುದೀಪ್‍ರ ಪೈಲ್ವಾನ್ ಸಿನಿಮಾ ಒಂದಲ್ಲ, ಎರಡಲ್ಲ.. 8 ಭಾಷೆಗಳಲ್ಲಿ ರಿಲೀಸ್ ಆಗಲಿದೆ.
ಕನ್ನಡದ ಜೊತೆ ತೆಲುಗು, ತಮಿಳು, ಹಿಂದಿ, ಮಲಯಾಳಂ, ಮರಾಠಿ, ಪಂಜಾಬಿ, ಬೋಜ್‍ಪುರಿ (ಬಿಹಾರದ ಭಾಷೆ), ಬೆಂಗಾಲಿಯಲ್ಲೂ ಪೈಲ್ವಾನ್ ಸಿನಿಮಾ ತೆರೆ ಕಾಣಲಿದೆ.
ಸುದೀಪ್ ಚಿತ್ರಗಳಿಗೆ ಉತ್ತರ ಭಾರತದಲ್ಲಿ ಒಳ್ಳೆಯ ಮಾರ್ಕೆಟ್ ಇದೆ. ಹೀಗಾಗಿಯೇ ಅಲ್ಲಿನ ಸ್ಥಳೀಯ ಭಾಷೆಗಳಲ್ಲಿ ಪೈಲ್ವಾನ್ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ ನಿರ್ದೇಶಕ ಕೃಷ್ಣ. ಡಿಸೆಂಬರ್‍ನಲ್ಲಿ ಪೈಲ್ವಾನ್ ಚಿತ್ರದ ಟೀಸರ್‍ವೊಮಂದನ್ನು ರಿಲೀಸ್ ಮಾಡಲು ಸಿದ್ಧತೆ ನಡೆದಿದೆ. ಶೂಟಿಂಗ್ ಜೊತೆ ಜೊತೆಯಲ್ಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳೂ ನಡೆಯುತ್ತಿವೆ. ಲೋಕಸಭೆ ಚುನಾವಣೆಗೆ ಮುನ್ನ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ ನಿರ್ದೇಶಕ ಕೃಷ್ಣ.