ರೆಬಲ್‍ಸ್ಟಾರ್ ಅಂಬರೀಷ್ ಅವರಿಗೆ ದೊಡ್ಡಮಟ್ಟದಲ್ಲಿ ಶ್ರದ್ಧಾಂಜಲಿ ಸಲ್ಲಿಸಲು ಚಿತ್ರೋದ್ಯಮ ನಿರ್ಧರಿಸಿದೆ. ಈ ಕುರಿತು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಲಿದೆ.
`ಅಂಬರೀಷ್ ಕನ್ನಡ ಚಿತ್ರರಂಗದ ಆಸ್ತಿ. ಚಿತ್ರರಂಗದ ಸಮಸ್ಯೆಯಗಳನ್ನು ಸುಲಭವಾಗಿ ಬಗೆಹರಿಸುತ್ತಿದ್ದರು. ಅವರು ಇಲ್ಲ ಎನ್ನುವುದನ್ನೇ ನಮಗೆ ಈಗಲೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಬೇಕು ಎಂದುಕೊಂಡಿದ್ದೇವೆ. ಕಲಾವಿದರ ಸಂಘ, ಕಾರ್ಮಿಕರ ಸಂಘ, ನಿರ್ದೇಶಕರು ಹಾಗೂ ನಿರ್ಮಾಪಕರ ಸಂಘದ ನಿರ್ದೇಶಕರ ಸಭೆ ಕರೆದು ನಿರ್ಧರಿಸುತ್ತೇವೆ. ನಂತರ ಕಾರ್ಯಕ್ರಮದ ರೂಪುರೇಷೆಗಳನ್ನು ಯೋಜಿಸುತ್ತೇವೆ' ಎಂದು ತಿಳಿಸಿದ್ದಾರೆ ಫಿಲಂ ಚೇಂಬರ್ ಅಧ್ಯಕ್ಷ ಎಸ್.ಎ. ಚಿನ್ನೇಗೌಡ.