` ಸಿದ್ಧಗಂಗಾ ಶ್ರೀಗಳ ಅನಾರೋಗ್ಯ - ಐ ಲವ್ ಯೂ ಆಡಿಯೋ ರಿಲೀಸ್ ಮುಂದಕ್ಕೆ.. - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
i love you audio release postponed
I love You

ನಿರ್ದೇಶಕ ಆರ್.ಚಂದ್ರು, ಐ ಲವ್ ಯೂ ಚಿತ್ರದ ಆಡಿಯೋ ಬಿಡುಗಡೆಯನ್ನು ಮುಂದೂಡಿದ್ದಾರೆ. ಫೆಬ್ರವರಿ 14ರಂದು ಸಿನಿಮಾ ರಿಲೀಸ್‍ಗೆ ಪ್ಲಾನ್ ಮಾಡಿರುವ ಆರ್.ಚಂದ್ರು, ಇಂದು ದಾವಣಗೆರೆಯಲ್ಲಿ ಆಡಿಯೋ ರಿಲೀಸ್ ಇಟ್ಟುಕೊಂಡಿದ್ದರು. ತೆಲುಗು ಹಾಗೂ ಕನ್ನಡ ಚಿತ್ರರಂಗದ ಸ್ಟಾರ್‍ಗಳು ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಆರ್.ಚಂದ್ರು, ಆಡಿಯೋ ಬಿಡುಗಡೆ ಮುಂದೂಡಿದ್ದಾರೆ. ಇದಕ್ಕೆ ಕಾರಣ, ಸಿದ್ಧಗಂಗಾ ಶ್ರೀಗಳ ಆನಾರೋಗ್ಯ.

`ನಾಡಿನ ಜನರೆಲ್ಲ ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ಈ ವೇಳೆ ಅದ್ಧೂರಿಯಾಗಿ ಆಡಿಯೋ ಬಿಡುಗಡೆ ಮಾಡುವುದಕ್ಕೆ ಮನಸ್ಸು ಒಪ್ಪಲಿಲ್ಲ. ಹೀಗಾಗಿ ಕಾರ್ಯಕ್ರಮ ಮುಂದೂಡಿದ್ದೇವೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸುತ್ತೇವೆ'' ಎಂದಿದ್ದಾರೆ ಆರ್.ಚಂದ್ರು.

ಉಪೇಂದ್ರ, ರಚಿತಾ ರಾಮ್, ಸೋನು ಗೌಡ ಪ್ರಧಾನ ಪಾತ್ರದಲ್ಲಿರುವ ಸಿನಿಮಾ, ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ನಿರ್ಮಾಣವಾಗಿದೆ.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery