ರಾಜಕುಮಾರ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಯುವರತ್ನ ಚಿತ್ರದ ಶೂಟಿಂಗ್, ಫೆಬ್ರವರಿ 14ರಿಂದ ಶುರುವಾಗುತ್ತಿದೆ. ಚಿತ್ರದ ಭರ್ಜರಿ ಆ್ಯಕ್ಷನ್ ಸೀನ್ಗಳೊಂದಿಗೇ ಚಿತ್ರೀಕರಣ ಆರಂಭವಾಗುತ್ತಿರುವುದು ವಿಶೇಷ.
ರಾಜಕುಮಾರ ನಂತರ, ಸಂತೋಷ್ ಆನಂದ್ರಾಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರವಿದು. ಹೊಂಬಾಳೆ ಪ್ರೊಡಕ್ಷನ್ಸ್ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣದ ಸಿನಿಮಾವನ್ನು ದಸರಾ ವೇಳೆಗೆ ತೆರೆಗೆ ತರುವುದಾಗಿ ಚಿತ್ರತಂಡ ಈಗಾಗಲೇ ಘೋಷಿಸಿದೆ.