ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರ ಬಿಡುಗಡೆಗೆ ರೆಡಿಯಾಗುತ್ತಿರುವಾಗಲೇ ಚಿತ್ರಕ್ಕೆ ಡಿಮ್ಯಾಂಡ್ ಜೋರಾಗಿದೆ. ಚಿತ್ರದ ವಿತರಣೆ ಹೊಣೆಯನ್ನು ನಿರ್ಮಾಪಕ ಕಾರ್ತಿಕ್ ಗೌಡ ವಹಿಸಿಕೊಂಡಿದ್ದಾರೆ. ಕಾರ್ತಿಕ್ ಗೌಡ ಅವರ ಕೆ.ಆರ್.ಜಿ. ಸ್ಟುಡಿಯೋ ಮೂಲಕ ಯಜಮಾನ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಯಜಮಾನ ಚಿತ್ರವನ್ನು ರಿಲೀಸ್ ಮಾಡುವುದಕ್ಕೆ ಎಕ್ಸೈಟ್ ಆಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ ಕಾರ್ತಿಕ್ ಗೌಡ. ಕೆಜಿಎಫ್‍ನ ಸಹನಿರ್ಮಾಪಕರಲ್ಲಿ ಒಬ್ಬರಾದ ಕಾರ್ತಿಕ್ ಗೌಡ, ವಿಜಯ್ ಕಿರಗಂದೂರು ಅವರ ಸಂಬಂಧಿಯೂ ಹೌದು. ದರ್ಶನ್, ರಶ್ಮಿಕಾ ಮಂದಣ್ಣ ಅಭಿನಯದ ಸಿನಿಮಾಗೆ ಪಿ.ಕುಮಾರ್, ಹರಿಕೃಷ್ಣ ನಿರ್ದೇಶಕರು. ಶೈಲಜಾ ನಾಗ್ ಮತ್ತು ಬಿ.ಸುರೇಶ್ ನಿರ್ಮಾಣದ ಸಿನಿಮಾ ಇದೇ ತಿಂಗಳ ಅಂತ್ಯಕ್ಕೆ ಅಥವಾ ಮಾರ್ಚ್‍ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.