ದರ್ಶನ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಯಜಮಾನ ಸಿನಿಮಾ ರಿಲೀಸ್‍ಗೆ ಕ್ಷಣಗಣನೆ ಶುರುವಾಗಿದೆ. ದರ್ಶನ್ ಚಿತ್ರ ಮಾರ್ಚ್ 1ರಂದು 800ಕ್ಕೂ ಹೆಚ್ಚು ಥಿಯೇಟರುಗಳಲ್ಲಿ ಬಿಡುಗಡೆಯಾಗುತ್ತಿದೆ. ಅದು ದರ್ಶನ್ ಕ್ರೇಜ್.
ಕಲಾತ್ಮಕ ಚಿತ್ರಗಳ ಮೂಲಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕರಾದ ಶೈಲಜಾ ನಾಗ್, ಬಿ.ಸುರೇಶ್ ಇದೇ ಮೊದಲ ಬಾರಿಗೆ ಕಮರ್ಷಿಯಲ್ ಸಿನಿಮಾ ಮಾಡಿದ್ದಾರೆ. ಹರಿಕೃಷ್ಣ, ಕುಮಾರ್ ಜಂಟಿ ನಿರ್ದೇಶನದ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ತಾನ್ಯಾ ಹೋಪ್ ನಾಯಕಿಯರು. ದೇವರಾಜ್, ಧನಂಜಯ್, ರವಿಶಂಕರ್, ಸಾಧುಕೋಕಿಲ ನಸಿರುವ ಯಜಮಾನ, ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ.