ರಣಂ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬಾಗಲೂರು ಸಮೀಪ ರಣಂ ಚಿತ್ರದ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿದ್ದರು. ಚಿತ್ರೀಕರಣಕ್ಕೆ ಯಾವುದೇ ಪೂರ್ವಾನುಮತಿ ಪಡೆಯದೆ, ಸುರಕ್ಷತಾ ಕ್ರಮಗಳನ್ನೂ ಕೈಗೊಳ್ಳದೆ ಇಬ್ಬರ ಸಾವಿಗೆ ಕಾರಣವಾದ ಆರೋಪದ ಮೇಲೆ ಚಿತ್ರದ ನಿರ್ಮಾಪಕ, ಸಾಹಸ ನಿರ್ದೇಶಕರ ವಿರುದ್ಧ ದೂರು ದಾಖಲಾಗಿತ್ತು.
ಘಟನೆ ನಂತರ ತಲೆಮರೆಸಿಕೊಂಡಿದ್ದ ಕನಕಪುರ ಶ್ರೀನಿವಾಸ್ ಅವರನ್ನು ಜೆಸಿ ರಸ್ತೆಯ ಲಾಡ್ಜ್‍ವೊಂದರಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.