` ಹೈದರಾಬಾದ್‍ನಲ್ಲಿ ಮುನಿರತ್ನ ಕುರುಕ್ಷೇತ್ರ  - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
kurulshetra promotion in hyderabad
Kurukshetra Promotion In Hyderabad

ಕುರುಕ್ಷೇತ್ರ ಚಿತ್ರದ ಪ್ರಚಾರ ಭರದಿಂದ ನಡೆಯುತ್ತಿದೆ. ಏಕಕಾಲದಲ್ಲಿ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಮುನಿರತ್ನ ಕುರುಕ್ಷೇತ್ರ ಚಿತ್ರವನ್ನು ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭರ್ಜರಿ ಪ್ರಮೋಷನ್ ಮಾಡಲಾಗುತ್ತಿದೆ. ಹೈದರಾಬಾದ್‍ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುರುಕ್ಷೇತ್ರ ಚಿತ್ರದ ಆಡಿಯೋ ರಿಲೀಸ್ ಮಾಡಲಾಗಿದೆ.

ಕುಮಾರಸ್ವಾಮಿ ಸರ್ಕಾರದ ಪತನಕ್ಕೆ ಕಾರಣರಾದವರಲ್ಲಿ ಒಬ್ಬರಾದ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ, ತಮ್ಮ ಚಿತ್ರದ ಪ್ರಮೋಷನ್ ಮೂಲಕ ಮತ್ತೆ ಕಾಣಿಸಿಕೊಂಡಿದ್ದಾರೆ. ಕುಮಾರಸ್ವಾಮಿ  ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಇದೇ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಾರೆ.

ಇದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಹಾಗೂ ಅಂಬರೀಷ್ ಅಭಿನಯದ ಕಟ್ಟಕಡೆಯ ಸಿನಿಮಾ. ಆಗಸ್ಟ್ 2ಕ್ಕೆ ರಿಲೀಸ್.