ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ರಿಲೀಸ್ ಆಗುತ್ತಿರುವುದು ಸೆಪ್ಟೆಂಬರ್ 12ಕ್ಕೆ. ಟ್ರೇಲರ್, ಹಾಡು ರಿಲೀಸ್ ಆಗಿದ್ದು ದೊಡ್ಡ ಹವಾ ಎಬ್ಬಿಸಿದೆ. ಹೆಬ್ಬುಲಿ ಕೃಷ್ಣ ನಿರ್ದೇಶನದ ಚಿತ್ರಕ್ಕೆ ಹಂಚಿಕೆದಾರರಿಂದಲೇ ಡಿಮ್ಯಾಂಡ್ ಬಂದಿದೆ. ಅದರಲ್ಲೂ ಹಿಂದಿ ಭಾಷೆಯ ಥಿಯೇಟರ್ ಮಾಲೀಕರು ಸ್ವತಃ ಪೈಲ್ವಾನ್ ಚಿತ್ರವನ್ನು ನಮಗೆ ಕೊಡಿ ಎಂದು ಕೇಳುತ್ತಿದ್ದಾರೆ.
ಉತ್ತರ ಭಾರತದಲ್ಲಿಯೇ 1500ಕ್ಕೂ ಹೆಚ್ಚು ಥಿಯೇಟರ್ಸ್, ಆಂಧ್ರದಲ್ಲಿ 300+, ತಮಿಳಿನಲ್ಲಿ 200+, ಕೇರಳದಲ್ಲಿ 100+ ಥಿಯೇಟರುಗಳಲ್ಲಿ ಪೈಲ್ವಾನ್ ರಿಲೀಸ್ ಆಗಲಿದೆ. ಜಗತ್ತಿನಾದ್ಯಂತ ಒಂದೇ ದಿನ 3000ಕ್ಕೂ ಹೆಚ್ಚು ಸೆಂಟರುಗಳಲ್ಲಿ ಸಿನಿಮಾ ರಿಲೀಸ್ ಮಾಡಲಿದ್ದೇವೆ ಎಂದಿದ್ದಾರೆ ನಿರ್ದೇಶಕ ಕೃಷ್ಣ.
ಕನ್ನಡದಲ್ಲಿ ಕೆಆರ್‍ಜಿ ಸ್ಟುಡಿಯೋ, ತೆಲುಗಿನಲ್ಲಿ ವಾರಾಹಿ, ತಮಿಳಿನಲ್ಲಿ ವೈಎನ್‍ಓಟಿಎಕ್ಸ್ ಮಾರ್ಕೆಟಿಂಗ್ & ಡಿಸ್ಟ್ರಿಬ್ಯೂಷನ್, ಮಲಯಾಳಂನಲ್ಲಿ ಪಲ್ಲವಿ ರಿಲೀಸ್, ಹಿಂದಿಯಲ್ಲಿ ಜೀ ಸ್ಟುಡಿಯೋಸ್ ಸಿನಿಮಾ ವಿತರಣೆ ಹಕ್ಕು ಪಡೆದುಕೊಂಡಿವೆ.
ಸುದೀಪ್ ಜೊತೆ ಸುನಿಲ್ ಶೆಟ್ಟಿ, ಆಕಾಂಕ್ಷಾ ಸಿಂಗ್ ಪ್ರಧಾನ ಪಾತ್ರದಲ್ಲಿದ್ದು, ಸ್ವಪ್ನಾ ಕೃಷ್ಣ ಈ ಚಿತ್ರದ ಮೂಲಕ ಮೊದಲ ಬಾರಿಗೆ ಸಿನಿಮಾ ನಿರ್ಮಾಪಕಿಯಾಗಿದ್ದಾರೆ.