ಕಿಚ್ಚ ಸುದೀಪ್ ಇದೇ ಮೊದಲ ಬಾರಿಗೆ ಕುಸ್ತಿ ಪಟುವಾಗಿ ಸಿಕ್ಸ್‍ಪ್ಯಾಕ್ ಮಾಡಿಕೊಂಡೇ ನಟಿಸಿರುವ ಚಿತ್ರ ಪೈಲ್ವಾನ್. ಸುನಿಲ್ ಶೆಟ್ಟಿ, ಆಕಾಂಕ್ಷಾ ಸಿಂಗ್, ಕಬೀರ್ ಸಿಂಗ್ ದುಲ್ಹನ್, ಚಿಕ್ಕಣ್ಣ, ನಟಿಸಿರುವ ಚಿತ್ರಕ್ಕೆ ಕೃಷ್ಣ ನಿರ್ದೇಶಕ. ಸ್ವಪ್ನಾ ಕೃಷ್ಣ ನಿರ್ಮಾಪಕಿ. ಅರ್ಜುನ್ ಜನ್ಯ ಸಂಗೀತ ನೀಡಿರುವ ಚಿತ್ರ, ಏಕಕಾಲಕ್ಕೆ 5 ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ.
ಕನ್ನಡದ ಬಹುನಿರೀಕ್ಷೆಯ ಚಿತ್ರವೀಗ ಸೆನ್ಸಾರ್ ಪರೀಕ್ಷೆ ಪಾಸ್ ಆಗಿದೆ. ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ ಸೆನ್ಸಾರ್ ಮಂಡಳಿ.