ಕೆಜಿಎಫ್ ಚಾಪ್ಟರ್ 2 ಚಿತ್ರದ ಚಿತ್ರೀಕರಣ ಕೋಲಾರದಲ್ಲಿ ಮುಕ್ತಾಯವಾಗಿದೆ. 2ನೇ ಶೆಡ್ಯೂಲ್ ಚಿತ್ರೀಕರಣ ಹೈದರಾಬಾದ್‍ನಲ್ಲಿ ಶುರುವಾಗಿದೆ. ಇಡೀ ಚಿತ್ರತಂಡ ಈಗ ಹೈದರಾಬಾದ್‍ನಲ್ಲಿ ಬೀಡುಬಿಟ್ಟಿದೆ.
ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್, ಅನಂತನಾಗ್, ಮಾಳವಿಕಾ ಅವಿನಾಶ್ ಸೇರಿದಂತೆ ಮತ್ತೊಮ್ಮೆ ಕಲಾವಿದರ ತಂಡ ಒಗ್ಗೂಡಿದೆ. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಸಾಹಸ ದೃಶ್ಯಗಳ ಭರ್ಜರಿ ಚಿತ್ರೀಕರಣ ನಡೆಯುತ್ತಿದೆ. ಸೆಪ್ಟೆಂಬರ್ ಕೊನೆಯ ವೇಳೆಗೆ ಚಿತ್ರದ ಶೇ.60ರಷ್ಟು ಚಿತ್ರೀಕರಣ ಮುಗಿಸುವ ತವಕದಲ್ಲಿದೆ ಕೆಜಿಎಫ್ ಟೀಂ.
ಹೊಂಬಾಳೆ ಫಿಲಂಸ್‍ನಲ್ಲಿ ಬರುತ್ತಿರುವ ಕೆಜಿಎಫ್ ಚಾಪ್ಟರ್-2 ಚಿತ್ರವನ್ನು ಮೊದಲ ಭಾಗಕ್ಕಿಂತ ಅದ್ಧೂರಿಯಾಗಿ ತೆರೆ ಮೇಲೆ ತರಲು ಉತ್ಸುಕರಾಗಿದ್ದಾರೆ ನಿರ್ಮಾಪಕ ವಿಜಯ್ ಕಿರಗಂದೂರು.