ದರ್ಶನ್ ಅಭಿನಯದ ರಾಬರ್ಟ್ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿರುವಾಗಲೇ ಚಿತ್ರದ ಹೀರೋಯಿನ್ ಯಾರು ಎಂಬ ಕುತೂಹಲಕ್ಕೆ ಉತ್ತರ ಕೊಟ್ಟಿದ್ದಾರೆ ನಿರ್ದೇಶಕ ತರುಣ್ ಸುಧೀರ್. ಪೋಸ್ಟರ್‍ಗಳ ಮೂಲಕವೇ ಕುತೂಹಲ ಹುಟ್ಟಿಸಿರುವ ಚಿತ್ರವಿದು. ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ತಾರೆಯರು ನಾಯಕಿಯಾಗುತ್ತಾರೆ ಎಂಬ ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದ ತರುಣ್, ಅಪ್ಪಟ ಕನ್ನಡದ ಹುಡುಗಿಯನ್ನೇ ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ಆಶಾಭಟ್, ದರ್ಶನ್ ಎದುರು ನಟಿಸಲಿರುವ ನಾಯಕಿ.
ಆಶಾಭಟ್, ಬಣ್ಣದ ಲೋಕಕ್ಕೆ ಹೊಸಬರೇನಲ್ಲ. ಹಿಂದಿಯಲ್ಲಿ ಜಂಗ್ಲಿ ಅನ್ನೋ ಸಿನಿಮಾಗೆ ನಾಯಕಿಯಾಗಿದ್ದವರು. ಇನ್ನು ಆಶಾಭಟ್, ಭದ್ರಾವತಿಯ ಹುಡುಗಿ. 2014ರಲ್ಲಿ ಮಿಸ್ ಸೂಪರ್ ನ್ಯಾಷನಲ್ ಪಟ್ಟ ಗೆದ್ದಿದ್ದ ಚೆಲುವೆ. ಈ ಚಿತ್ರದ ಮೂಲಕ ಕನ್ನಡದ ಹುಡುಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
ಚಿತ್ರದ ನಾಯಕಿ ಆಶಾ ಭಟ್‍ಗೆ ರಾಬರ್ಟ್ ಕುಟುಂಬಕ್ಕೆ ಸ್ವಾಗತ ಎಂದು ವೆಲ್‍ಕಂ ಹೇಳಿದ್ದಾರೆ ತರುಣ್ ಸುಧೀರ್. ಉಮಾಪತಿ ಚಿತ್ರದ ನಿರ್ಮಾಪಕ.