ಸೃಜನ್ ಲೋಕೇಶ್ ಅಭಿನಯದ ಎಲ್ಲಿದ್ದೆ ಇಲ್ಲಿ ತನಕ ಸಿನಿಮಾ ಫಾರಿನ್ನಿಗೆ ಹೋಗಿದೆ. 25ನೇ ದಿನದತ್ತ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಚಿತ್ರ ಈ ವಾರ ವಿದೇಶಗಳಲ್ಲಿ ರಿಲೀಸ್ ಆಗಿದೆ. ಸೃಜನ್ ಲೋಕೇಶ್, ಹರಿಪ್ರಿಯಾ ಅಭಿನಯದ ಈ ಚಿತ್ರಕ್ಕೆ ತೇಜಸ್ವಿ ಆ್ಯಕ್ಷನ್ ಕಟ್ ಹೇಳಿದ್ದರು. ತಿಳಿ ಹಾಸ್ಯದ ಎಳೆಯಿದ್ದ ಲವ್ ಸ್ಟೋರಿ ಪ್ರೇಕ್ಷಕರ ಮನ ಗೆದ್ದಿದೆ.
ಈ ವಾರದಿಂದ ಆಸ್ಟ್ರೇಲಿಯಾದ ಸಿಡ್ನಿ, ಮೆಲ್ಬೋರ್ನ್, ಪರ್ತ್ ಮತ್ತು ನ್ಯೂಜಿಲ್ಯಾಂಡ್‍ನಲ್ಲಿ ಎಲ್ಲಿದ್ದೆ ಇಲ್ಲಿ ತನಕ ರಿಲೀಸ್ ಆಗಿದೆ.