ರಕ್ಷಿತ್ ಶೆಟ್ಟಿ, ಶಾನ್ವಿ ಶ್ರೀವಾಸ್ತವ್ ಅಭಿನಯದ ಅವನೇ ಶ್ರೀಮನ್ನಾರಾಯಣ ಡಿಸೆಂಬರ್ 27ರಂದು ರಿಲೀಸ್ ಆಗುತ್ತಿದೆ. ಅದ್ಧೂರಿಯಾಗಿ ರಿಲೀಸ್ ಆಗಲಿದೆ ಎನ್ನುವುದರಲ್ಲಿ ನೋ ಡೌಟ್. ಪ್ರತಿಯೊಂದನ್ನೂ ಪ್ಲಾನ್ ಮಾಡಿ ಹೆಜ್ಜೆಯಿಡುವ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ, ಬಿಡುಗಡೆಗೆ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಅಂದಹಾಗೆ ಈ ಸಿನಿಮಾ ಡಿಸೆಂಬರ್ 27ರಂದೇ 20 ದೇಶಗಳಲ್ಲಿ.. 175ಕ್ಕೂ ಹೆಚ್ಚು ಸೆಂಟರುಗಳಲ್ಲಿ ರಿಲೀಸ್ ಆಗಲಿದೆ. ರಿಲೀಸ್ ಹೊತ್ತಿಗೆ ಈ ಸಂಖ್ಯೆ ಇನ್ನಷ್ಟು ಹೆಚ್ಚಾದರೂ ಅಚ್ಚರಿಯಿಲ್ಲ.
ರಕ್ಷಿತ್ ಶೆಟ್ಟಿ ಹಾಗೂ ಪುಷ್ಕರ್ ಬ್ಯಾನರ್ ಸಿನಿಮಾಗಳಲ್ಲಿ ವಿದೇಶದಲ್ಲಿ ಒಳ್ಳೆಯ ಮಾರ್ಕೆಟ್ ಇದೆ. ಸಚಿನ್ ರವಿ ನಿರ್ದೇಶನದ ಅವನೇ ಶ್ರೀಮನ್ನಾರಾಯಣ ಸಿನಿಮಾ ಹೆಚ್ಚೂ ಕಡಿಮೆ ಒಂದು ವರ್ಷ ಶೂಟಿಂಗ್ ಆಗಿರುವ ಸಿನಿಮಾ.