ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ. ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3ಗೆ ಶಿವ ಕಾರ್ತಿಕ್ ನಿರ್ದೇಶಕ. ಮಡೊನ್ನಾ ಸೆಬಾಸ್ಟಿಯನ್ ನಾಯಕಿಯಾಗಿರುವ ಚಿತ್ರದಲ್ಲಿ ಬಾಲಿವುಡ್ನ ಅಫ್ತಾಬ್ ಶಿವದಾಸನಿ, ಶ್ರದ್ಧಾ ದಾಸ್, ಸುಧಾಂಶು ಪಾಂಡೆ ಮೊದಲಾದ ಸೀನಿಯರ್ ಕಲಾವಿದರೇ ನಟಿಸಿದ್ದಾರೆ.
ಮಾತಿನ ಭಾಗದ ಎಲ್ಲ ದೃಶ್ಯಗಳ ಚಿತ್ರೀಕರಣ ಮುಗಿದಿದ್ದು, ಹಾಡುಗಳ ಚಿತ್ರೀಕರಣ ಬಾಕಿಯಿದೆಯಂತೆ. ಅರ್ಜುನ್ ಜನ್ಯ ಸಂಗೀತದಲ್ಲಿ 3 ಹಾಡುಗಳಿದ್ದು, ಪುದುಚೇರಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ಹಾಡುಗಳ ಚಿತ್ರೀಕರಣ ನಡೆಯಲಿದೆ.