ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಬೆಂಗಳೂರಿನಿಂದ ಬಳ್ಳಾರಿಗೆ ಶಿಫ್ಟ್ ಆಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿರುವ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ಬಿರುಸಿನಿಂದ ಸಾಗುತ್ತಿದೆ. ಕಾರ್ಖಾನೆಯಲ್ಲಿಯೇ ಸೆಟ್ ಹಾಕಲಾಗಿದ್ದು, ನೂರಕ್ಕೂ ಹೆಚ್ಚು ಕಲಾವಿದರು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಚಿತ್ರೀಕರಣ ಕಡೆಯ ಹಂತದಲ್ಲಿದೆ. ಆದರೆ ಚಿತ್ರತಂಡಕ್ಕೆ ಸವಾಲಾಗಿರುವುದು ಯಶ್ ನೋಡಲು ಬರುತ್ತಿರುವ ಜನ. ಸಂಡೂರಿನಲ್ಲಿ ಕೆಜಿಎಫ್ ಟೀಂ ಇದೆ ಎಂದು ಗೊತ್ತಾಗಿದ್ದೇ ತಡ, ಅಲ್ಲಿಗೆ ಯಶ್ ಅಭಿಮಾನಿಗಳ ದಂಡೇ ಹರಿದುಬರುತ್ತಿದೆ. ಹೊಂಬಾಳೆ ಟೀಂ ಈ ಕ್ರೌಡ್ ನಿಯಂತ್ರಿಸಲು ಹರಸಾಹಸ ಮಾಡುತ್ತಿದೆ.