ಖಾಕಿ, ದಿ ಪವರ್ ಆಫ್ ಕಾಮನ್ ಮ್ಯಾನ್.. ಈಗ ಥಿಯೇಟರುಗಳಲ್ಲಿದೆ. ಚಿತ್ರದಲ್ಲಿ ಚಿರಂಜೀವಿ ಸರ್ಜಾ ಕೇಬಲ್ ಹುಡುಗ. ಬಸಣ್ಣಿ ಖ್ಯಾತಿಯ ತಾನ್ಯಾ ಹೋಪ್ ನಾಯಕಿಯಾಗಿರುವ ಚಿತ್ರದಲ್ಲಿ ಸಂಚಾರಿ ವಿಜಯ್ ಹಾಗೂ ಛಾಯಾಸಿಂಗ್ ಪ್ರಮುಖ ಪಾತ್ರಗಳಲ್ಲಿದ್ದಾರೆ.
ನವೀನ್ ರೆಡ್ಡಿ ನಿರ್ದೇಶನದ ಚಿತ್ರದಲ್ಲಿ ವಿಲನ್ ಆಗಿ ಅಬ್ಬರಿಸಿರುವುದು ಕನ್ನಡದ ಸೆನ್ಸೇಷನಲ್ ಡೈರೆಕ್ಟರ್ ಶಿವಮಣಿ. ಒಂದು ಪಕ್ಕಾ ಕಮರ್ಷಿಯಲ್ ಸಿನಿಮಾ ಆಗಿರುವ ಖಾಕಿ ಚಿತ್ರಕ್ಕೆ ತರುಣ್ ಶಿವಪ್ಪ ನಿರ್ಮಾಪಕ.