` ಶಿವರಾತ್ರಿಗೆ ಕಿಚ್ಚ ಕಿಚ್ಚ ಎನ್ನಿರೋ.. - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
kotigobba 3 teaser for shivaratri
Kotigobba 3 Movie Image

ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ರಿಲೀಸ್ ಆಗೋಕೆ ಇನ್ನೇನು ಕೆಲವೇ ದಿನ. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ನಲ್ಲಿರುವ ಚಿತ್ರ ಟೀಸರ್ ರಿಲೀಸ್ ಮಾಡೋಕೆ ಶಿವರಾತ್ರಿಯಂದು ಮುಹೂರ್ತ ಫಿಕ್ಸ್ ಆಗಿದೆ.

2020ರ ಬಹು ನೀರಿಕ್ಷಿತ ಚಿತ್ರ ಕೋಟಿಗೊಬ್ಬ 3 ಚಿತ್ರದ ಟೀಸರ್ ಫೆಬ್ರವರಿ 21 ರಿಲೀಸ್ ಆಗುತ್ತಿದ್ದು, ಶಿವರಾತ್ರಿಯ ದಿನ ಕಿಚ್ಚನ ಜಪ ಮಾಡುವಂತಾಗಲಿದೆ.

ನಿರ್ಮಾಪಕ ಸೂರಪ್ಪ ಬಾಬು ನಿರ್ಮಾಣ ಮಾಡುತ್ತಿರುವ ಕೋಟಿಗೊಬ್ಬ 3 ಚಿತ್ರಕ್ಕೆ ಶಿವ ಕಾರ್ತಿಕ್ ನಿರ್ದೇಶನವಿದೆ. ಕೋಟಿಗೊಬ್ಬ 2 2016ರಲ್ಲಿ ರಿಲೀಸ್ ಆಗಿತ್ತು. ಅದಾದ 4 ವರ್ಷಗಳ ನಂತರ  ಕೋಟಿಗೊಬ್ಬ 3 ರಿಲೀಸ್ ಆಗುತ್ತಿದೆ. ಫೆಬ್ರವರಿ 21ರ ಶಿವರಾತ್ರಿ ದಿನ ಮಧ್ಯಾಹ್ನ 12 ಗಂಟೆ 1 ನಿಮಿಷಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಸುದೀಪ್ ಎದುರು ಮಲಯಾಳಂ ನಟಿ ಮಡೋನಾ ಸೆಬಾಸ್ಟಿಯನ್ ನಾಯಕಿಯಾಗಿದ್ದಾರೆ.