ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇರುವ ಇನ್ನೊಂದು ಬಿರುದೇ ಬಾಕ್ಸಾಫೀಸ್ ಸುಲ್ತಾನ. ಅದು ರಾಬರ್ಟ್ ಚಿತ್ರದಲ್ಲಿ ಮತ್ತೊಮ್ಮೆ ಸಾಬೀತಾಗುವ ಸೂಚನೆಗಳಿವೆ. ಏಕೆಂದರೆ ರಾಬರ್ಟ್ ಚಿತ್ರ ರಿಲೀಸ್ ಆಗುವುದಕ್ಕೂ ಮೊದಲೇ 50 ಕೋಟಿಗೂ ಹೆಚ್ಚು ಬಿಸಿನೆಸ್ ಮಾಡಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಸಂಚಲನ ಸೃಷ್ಟಿಸಿದೆ.
ಉಮಾಪತಿ ನಿರ್ಮಾಣದ ರಾಬರ್ಟ್ ಚಿತ್ರದ ಡಿಸ್ಟ್ರಿಬ್ಯೂಷನ್ ಹಕ್ಕುಗಳು 35 ಕೋಟಿಗೂ ಹೆಚ್ಚು ಮೊತ್ತಕ್ಕೆ ಮಾರಾಟವಾಗಿದೆಯಂತೆ. ಚಿತ್ರದ ಆಡಿಯೋ, ಸ್ಯಾಟಲೈಟ್, ಡಬ್ಬಿಂಗ್ ರೈಟ್ಸ್ ಎಲ್ಲವನ್ನೂ ಲೆಕ್ಕ ಹಾಕಿದರೆ ಬಿಸಿನೆಸ್ ಮೊತ್ತ 50 ಕೋಟಿಗೂ ಹೆಚ್ಚು.
ದರ್ಶನ್ ಅವರಿಗೆ ಇದೇ ಮೊದಲ ಬಾರಿಗೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ವಿನೋದ್ ಪ್ರಭಾಕರ್ ಇನ್ನೊಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆಶಾ ಭಟ್, ಸೋನಲ್ ಮಂಥೆರೋ ಕೂಡಾ ಪ್ರಧಾನ ಪಾತ್ರಗಳಲ್ಲಿರೋ ಚಿತ್ರ ಏಪ್ರಿಲ್ 9ರಂದು ರಿಲೀಸ್ ಆಗಲಿದೆ.