ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಬಳ್ಳಾರಿಯ ಲಾಡ್ಜ್‍ನಲ್ಲಿ ಲಾಕ್ ಆಗಿದ್ದ ಜಯಂತಿ, ಲಾಕ್ ಡೌನ್ ಮುಗಿದ ಮೇಲೆ ಬೆಂಗಳೂರಿಗೆ ವಾಪಸ್ ಆಗಿದ್ದರು. ಅಸ್ತಮಾದಿಂದ ಬಳಲುತ್ತಿರುವ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಜಯಂತಿ ಅವರು ಗುಣಮುಖರಾಗುತ್ತಿದ್ದಾರೆ.
ಅಸ್ತಮಾ ಇದ್ದ ಹಿನ್ನೆಲೆಯಲ್ಲಿ ಜಯಂತಿ ಅವರ ಕೋವಿಡ್ 19 ಪರೀಕ್ಷೆ ಮಾಡಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಈ ಹಿಂದೆ ಜಯಂತಿ ಆಸ್ಪತ್ರೆ ಸೇರಿದ್ದಾಗ ಅವರು ಮೃತಪಟ್ಟಿದ್ದಾರೆ ಎಂಬ ವರದಿಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರ ಪುತ್ರ ಕೃಷ್ಣ ಕುಮಾರ್, ಅಮ್ಮ ಆರೋಗ್ಯವಾಗಿದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ. ಆತಂಕ ಬೇಡ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.