ಸರ್ಜಾ ಕುಟುಂಬಕ್ಕೆ ಕೋವಿಡ್ 19 ಬಿಟ್ಟೂ ಬಿಡದೆ ಕಾಡುತ್ತಿದೆ. ಮೊದಲಿಗೆ ಧ್ರುವ ಸರ್ಜಾ ಮತ್ತು ಪ್ರೇರಣಾ ಸರ್ಜಾ ಅವರಿಗೆ ಕೋವಿಡ್ 19 ಪಾಸಿಟಿವ್ ಬಂದಿತ್ತು. ಚೈನೀಸ್ ವೈರಸ್ ಸೋಂಕಿನಿಂದಾಗಿ ಆಸ್ಪತ್ರೆ ಸೇರಿದ್ದ ಧ್ರುವ-ಪ್ರೇರಣಾ, ಮತ್ತೆ ಮನೆಗೆ ವಾಪಸ್ ಆಗಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ಹೀಗಿರುವಾಗಲೇ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ಅವರಿಗೂ ಪಾಸಿಟಿವ್ ರಿಪೋರ್ಟ್ ಬಂದಿದೆ.
ಐಶ್ವರ್ಯಾಗೆ ಪಾಸಿಟಿವ್ ಬಂದಿದೆ. ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳು ಇರಲಿಲ್ಲ. ಪಾಸಿಟಿವ್ ಬಂದಿದೆ. ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆ. ಅವರಿಗೆ ಎಲ್ಲ ರೀತಿಯ ಮೆಡಿಕಲ್ ಸೌಲಭ್ಯವನ್ನೂ ಒದಗಿಸಲಾಗುತ್ತಿದೆ. ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂದಿದ್ದಾರೆ ಅರ್ಜುನ್ ಸರ್ಜಾ.
ಧ್ರುವ ಸರ್ಜಾ ಮತ್ತು ಪ್ರೇರಣಾ ಸರ್ಜಾ ಕೂಡಾ ಚೇತರಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ.