` ಕೆಜಿಎಫ್ ಚಾಪ್ಟರ್ 2 ವಿರುದ್ಧದ ಅರ್ಜಿ ವಜಾ ಮಾಡಿದ ಹೈಕೋರ್ಟ್ - chitraloka.com | Kannada Movie News, Reviews | Image

User Rating: 5 / 5

Star activeStar activeStar activeStar activeStar active
 
kgf 2 image
yash in kgf 2 movie

ಕೆಜಿಎಫ್ ಚಾಪ್ಟರ್ 2 ಚಿತ್ರದ ವಿರುದ್ಧ ದಾಖಲಾಗಿದ್ದ ಅರ್ಜಿಯೊಂದನ್ನು ಹೈಕೋರ್ಟ್ ವಜಾ ಮಾಡಿದೆ. ಹುಬ್ಬಳ್ಳಿಯ ಸಿ.ಶಿವಶಂಕರ್ ಎಂಬ ವ್ಯಕ್ತಿ ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರು ಕೊಟ್ಟಿದ್ದ ಕಾರಣವೂ ವಿಚಿತ್ರವಾಗಿತ್ತು. ಚಿತ್ರದಲ್ಲಿ ಸಂಜಯ್ ದತ್ ನಟಿಸುತ್ತಿದ್ದು, ಆತನೊಬ್ಬ ದೇಶದ್ರೋಹಿ. ಅಂತಹವನು ಕರ್ನಾಟಕಕ್ಕೇ ಕಾಲಿಡಬಾರದು. ಕನ್ನಡ ಸಿನಿಮಾಗಳಲ್ಲಿ ನಟಿಸಬಾರದು ಎಂದು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

you_tube_chitraloka1.gif

ಮುಂಬೈ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಈಗಾಗಲೇ ಶಿಕ್ಷೆ ಅನುಭವಿಸಿರುವ ಸಂಜಯ್ ದತ್, 2016ರಲ್ಲಿ ರಿಲೀಸ್ ಆಗಿದ್ದಾರೆ. ಆದರೆ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ ಎಂದಿರುವ ಹೈಕೋರ್ಟ್, ಅರ್ಜಿಯನ್ನು ವಜಾ ಮಾಡಿದೆ.