` ಹಿಂದಿ ಹೇರಿಕೆ ವಿರುದ್ಧ ದರ್ಶನ್, ರಿಷಭ್, ರೈ ಸೇರಿದಂತೆ ಸ್ಟಾರ್‍ಗಳ ಅಭಿಯಾನ - chitraloka.com | Kannada Movie News, Reviews | Image

User Rating: 3 / 5

Star activeStar activeStar activeStar inactiveStar inactive
 
Darshan, RIshab Joins #StopHindiImposition Campaign
Darshan

ದಕ್ಷಿಣದ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿ ದಕ್ಷಿಣದಲ್ಲಿ ಅಭಿಯಾನವೊಂದು ಶುರುವಾಗಿದೆ. ಸ್ಟಾಪ್‍ಹಿಂದಿಇಂಪೋಸಿಷನ್ ಎಂಬ ಹ್ಯಾಷ್‍ಟ್ಯಾಗ್‍ನಲ್ಲಿ ನಡೆಯುತ್ತಿರೋ ಈ ಅಭಿಯಾನಕ್ಕೆ ಕನ್ನಡ ಚಿತ್ರರಂಗದ ಸ್ಟಾರ್ ಕಲಾವಿದರು ಕೈ ಜೋಡಿಸಿದ್ದಾರೆ.

ಬಹುಭಾಷಾ ನಟ ಪ್ರಕಾಶ್ ರೈ ನಂಗೆ ಹಿಂದಿ ಬರಲ್ಲ ಹೋಗ್ರಪ್ಪ ಎಂಬ ಟೀಶರ್ಟ್ ಧರಿಸಿ ಅಭಿಯಾನಕ್ಕೆ ಕೈ ಜೋಡಿಸಿದ್ದರು. ಈಗ ಈ ಅಭಿಯಾನಕ್ಕೆ ಸೂಪರ್ ಸ್ಟಾರ್ ಪವರ್ ಸಿಕ್ಕಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ `ಹಿಂದಿ ಹೇರಿಕೆ ಪ್ರತಿಭಟಿಸದೆ ಸುಮ್ಮನಿದ್ದರೆ ಕನ್ನಡಿಗರ ಅಸ್ಥಿತ್ವವೇ ದೂರವಾಗುತ್ತೆ. ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ' ಎಂದ್ದಾರೆ.

ನಟ ನಿರ್ದೇಶಕ ರಿಷಭ್ ಶೆಟ್ಟಿ, ಸ್ಟಾರ್ ಡೈರೆಕ್ಟರ್ ಸಂತೋಷ್ ಆನಂದ್ ರಾಮ್,  ನಟ ಚೇತನ್, ಡಾಲಿ ಧನಂಜಯ್ ಮೊದಲಾದವರು ಹಿಂದಿ ಹೇರಿಕೆಯ ವಿರುದ್ಧ ಧ್ವನಿಯೆತ್ತಿದ್ದಾರೆ.