ಈಗಾಗಲೇ ಟ್ರೇಲರ್ ಮೂಲಕ ಸದ್ದು ಮಾಡಿರುವ ಸಸ್ಪೆನ್ಸ್ ಥ್ರಿಲ್ಲರ್ "ಮೋಕ್ಷ" ಚಿತ್ರ ಏಪ್ರಿಲ್ 16 ರಂದು ಬಿಡುಗಡೆಯಾಗಬೇಕಿತ್ತು. ರಾಜ್ಯದಲ್ಲಿ ಪುನಃ ಕೊರೋನ ಮಹಾಮಾರಿ ತನ್ನ ಅಟ್ಟಹಾಸ ತೋರಿಸುತ್ತಿದೆ . ಆ ಕಾರಣದಿಂದ ಚಿತ್ರವನ್ನು ಈ ವೈರಸ್ ಆರ್ಭಟ ಕಡಿಮೆಯಾಗುವವರೆಗೂ ಬಿಡುಗಡೆ ಮಾಡುವುದಿಲ್ಲ ಎನ್ನುತ್ತಾರೆ ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಸಮರ್ಥ್ ನಾಯಕ್.
ಈ ಚಿತ್ರದ ಹಾಡುಗಳಿಗೆ ಕಿಶನ್ ಮೋಹನ್ ಹಾಗೂ ಸಚಿನ್ ಬಾಲು ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಕಿಶನ್ ಮೋಹನ್ ಅವರದು.
ಗುರುಪ್ರಶಾಂತ್ ರೈ, ಜೋಮ್ ಜೋಸಫ್, ಕಿರಣ್ ಹಂಪಾಪುರ ಛಾಯಾಗ್ರಹಣ ಹಾಗೂ ವರುಣ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ.
ಮೋಹನ್ ಧನರಾಜ್ ಮತ್ತು ಆರಾಧ್ಯ ಲಕ್ಷ್ಮಣ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ತಾರಕ್ ಪೊನ್ನಪ್ಪ, ಭೂಮಿ ಅಜ್ಞಾನಿ, ಪ್ರಶಾಂತ್ ನಟನ ಮುಂತಾದ ವರು ಚಿತ್ರದ ತಾರಾಬಳಗದಲ್ಲಿದ್ದಾರೆ.