ಇತ್ತೀಚೆಗೆ ಕನ್ನಡ ಚಿತ್ರರಂಗವನ್ನು ಬೆಚ್ಚಿ ಬೀಳಿಸಿದ್ದ ಘಟನೆ ಲವ್ ಯೂ ರಚ್ಚು ಚಿತ್ರದ ಚಿತ್ರೀಕರಣ ವೇಳೆ ನಡೆದ ದುರಂತ. ಫೈಟರ್ ವಿವೇಕ್ ಎಂಬುವವರು ಸಾವಿಗೀಡಾಗಿದ್ದರು. ಚಿತ್ರದ ನಿರ್ದೇಶಕ, ಸಾಹಸ ನಿರ್ದೇಶಕ ಸೇರಿದಂತೆ ಕೆಲವರು ಅರೆಸ್ಟ್ ಕೂಡಾ ಆಗಿದ್ದರು. ಈಗ ಎಲ್ಲರೂ ಜಾಮೀನಿನ ಮೇಲೆ ಹೊರಗಿದ್ದಾರೆ. ದುರಂತದ ವೇಳೆ ನಿರ್ಮಾಪಕ ಗುರು ದೇಶಪಾಂಡೆ ಪತ್ನಿ ಪ್ರೀತಿಕಾ ದೇಶಪಾಂಡೆ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡೋದಾಗಿ ಘೋಷಿಸಿದ್ದರು.
ಈಗ ಮೃತ ವಿವೇಕ್ ಅವರ ಮನೆಗೆ ತೆರಳಿದ್ದ ನಿರ್ಮಾಪಕ ಗುರು ದೇಶಪಾಂಡೆ ವಿವೇಕ್ ಅವರ ತಾಯಿಗೆ 5 ಲಕ್ಷ ರೂ. ಪರಿಹಾರದ ಚೆಕ್ ನೀಡಿದ್ದಾರೆ. ಇನ್ನು 5 ಲಕ್ಷವನ್ನು ಸಿನಿಮಾ ರಿಲೀಸ್ ಆದ ಮೇಲೆ 2 ದಿನಗಳ ಒಳಗೆ ಕೊಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ವಿವೇಕ್ ಅವರ ತಮ್ಮನ ವಿದ್ಯಾಭ್ಯಾಸದ ಜವಾಬ್ದಾರಿಯನ್ನೂ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.