ಕರ್ನಾಟಕದ ಮನೆ ಮನೆಗೂ ಮಗನಂತಿದ್ದ ನಟ ಪುನೀತ್ ರಾಜ್ಕುಮಾರ್ ವಿಧಿವಶರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಪುನೀತ್ ಅವರನ್ನು ಆಸ್ಪತ್ರೆಗೆ ಕರೆತರುವ ವೇಳೆಗಾಗಲೇ ವಿಧಿ ತನ್ನ ಆಟ ಮುಗಿಸಿತ್ತು. ಪುನೀತ್ ರಾಜ್ಕುಮಾರ್ ಇನ್ನಿಲ್ಲ.
ಭಾನುವಾರ ಅಂತ್ಯಕ್ರಿಯೆ ನೆರವೇರಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪುನೀತ್ ಅವರ ಪುತ್ರಿ ನ್ಯೂಯಾರ್ಕ್ನಲ್ಲಿದ್ದು, ಅವರು ಬಂದ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನೆರವೇರಲಿವೆ.