` ನಟ ಕಿರಿಕ್ ಕೀರ್ತಿ ಮೇಲೆ ಹಲ್ಲೆ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
ನಟ ಕಿರಿಕ್ ಕೀರ್ತಿ ಮೇಲೆ ಹಲ್ಲೆ
Kirik Keerthi Image

ಪಬ್‍ವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಫೋಟೋ ತೆಗೆದ ಕಾರಣಕ್ಕೆ ಶುರುವಾದ ಜಗಳದಲ್ಲಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಲಾಗಿದೆ. ಸದಾಶಿವ ನಗರದ ಹ್ಯಾಮರ್ಡ್ ಪಬ್‍ನಲ್ಲಿ ಗಲಾಟೆ ನಡೆದಿದೆ.

ಕೀರ್ತಿ ತಮ್ಮ ಕೆಲವು ಸ್ನೇಹಿತರೊಂದಿಗೆ ಪಬ್‍ನಲ್ಲಿ ಪಾರ್ಟಿಗೆ ತೆರಳಿದ್ದರು. ಗುರುವಾರ ರಾತ್ರಿ ಸುಮಾರು 12.30ರ ಸಮಯದಲ್ಲಿ ಕೆಲವು ಯುವಕರು ಕೀರ್ತಿ ಅವರ ಫೋಟೋ ತೆಗೆದುಕೊಂಡರು. ಅನುಮತಿಯಿಲ್ಲದೆ ಫೋಟೋ ತೆಗೆಯುತ್ತಿರುವುದಕ್ಕೆ ಕೀರ್ತಿ ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆದು, ಅಪರಿಚಿತ ಯುವಕರು ಕೀರ್ತಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕೀರ್ತಿಯವರ ಕುತ್ತಿಗೆ ಭಾಗದಲ್ಲಿ ಗಾಯವಾಗಿದ್ದು, ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹಲ್ಲೆ ಮಾಡಿದವರು ಪರಾರಿಯಾಗಿದ್ದಾರೆ.

Amitab Bachchan Helps Film Workers On Labours Day

Food Kits Distribution To Media Personnel By Ministers Bc Patil Gallery