ಚಿತ್ರರಂಗಕ್ಕೆ ವರ್ಷದ ಕೊನೆಯಲ್ಲಿ ಮತ್ತೊಂದು ಆಘಾತ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಿರ್ದೇಶಕ ಕೆ.ವಿ.ರಾಜು ನಿಧನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಮುಂಜಾನೆ 8 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.
ಒಲವೇ ಬದುಕು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ದೇಶಕರಾಗಿ ಎಂಟ್ರಿ ಕೊಟ್ಟ ಕೆ.ವಿ.ರಾಜು ಸಿಡಿಗುಂಡಿನಂತಾ ಸಂಭಾಷಣೆಗಳಿಗೆ ಹೆಸರುವಾಸಿಯಾಗಿದ್ದರು. ಬೆಳ್ಳಿಕಾಲುಂಗುರ, ಯುದ್ಧಕಾಂಡ, ಸುಂದರಕಾಂಡ, ಸಂಗ್ರಾಮ, ಹುಲಿಯಾ, ಬೆಳ್ಳಿಮೋಡಗಳು, ಬಂಧಮುಕ್ತ.. ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದವರು ಕೆ.ವಿ.ರಾಜು.
2017ರಲ್ಲಿ ರವಿ ಶ್ರೀವತ್ಸ ನಿರ್ದೇಶನದ ಟೈಗರ್ ಗಲ್ಲಿ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದ ರಾಜು ನಂತರ ಚಿತ್ರರಂಗದಿಂದ ದೂರವೇ ಇದ್ದರು. ಹಿಂದಿಯಲ್ಲಿ ಅಮಿತಾಭ್ ಬಚ್ಚನ್ ಅವರಿಗೂ ಌಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಕೆ.ವಿ.ರಾಜು.