ಪುನೀತ್ ಅಕಾಲಿಕ ನಿಧನದ ಬಳಿಕ ಕರ್ನಾಟಕಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ಮೇರು ನಾಯಕ ರಾಹುಲ್ ಗಾಂಧಿ, ಪುನೀತ್ ರಾಜಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದರು. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್‍ನ ಹಲವು ನಾಯಕರು ರಾಹುಲ್ ಗಾಂಧಿ ಜೊತೆ ಪುನೀತ್ ನಿವಾಸಕ್ಕೆ ಭೇಟಿ ಕೊಟ್ಟರು.
ಸಿದ್ದಗಂಗಾ ಮಠಕ್ಕೆ ತೆರಳಿದ್ದ ರಾಹುಲ್ ಗಾಂಧಿ, ಅಲ್ಲಿಂದ ನೇರವಾಗಿ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿಯವರಿಗೆ ಸಾಂತ್ವನ ಹೇಳಿದರು. ಅತಿ ಕಿರಿಯ ವಯಸ್ಸಿನಲ್ಲೇ ಅತಿ ದೊಡ್ಡ ಸಾಧನೆ ಮಾಡಿದವರು ಪುನೀತ್ ರಾಜಕುಮಾರ್ ಎಂದ ರಾಹುಲ್ ಗಾಂಧಿ, ಪುನೀತ್ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.