ವಿಕ್ರಾಂತ್ ರೋಣ ಚಿತ್ರಕ್ಕೆ ಕಿಚ್ಚ ಸುದೀಪ್ ಹೀರೋ ಆದಾಗಲೇ ಒಂದು ಶಕ್ತಿ ಸಿಕ್ಕಿತ್ತು. ಅನೂಪ್ ಭಂಡಾರಿ ನಿರ್ದೇಶನದಲ್ಲಿ ತಯಾರಾಗುತ್ತಿರೋ ಸಿನಿಮಾ ಭರ್ಜರಿ ಸೌಂಡ್ ಮಾಡುತ್ತಿದೆ. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿರೋ ಸಿನಿಮಾ ಇಂಗ್ಲಿಷ್‍ನಲ್ಲೂ ರಿಲೀಸ್ ಆಗುತ್ತಿರೋದು ವಿಶೇಷ. ವಿಕ್ರಾಂತ್ ರೋಣ ಚಿತ್ರಕ್ಕೆ ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸ್ಟಾರ್ ಸಪೋರ್ಟ್ ಮಾಡುತ್ತಿದ್ದಾರೆ.
ಹಿಂದಿಯಲ್ಲಿ ಖುದ್ದು ಸಲ್ಮಾನ್ ಖಾನ್ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಇನ್ನೊಂದೆಡೆ ವಿತರಣೆಯ ಜವಾಬ್ದಾರಿ ಹೊತ್ತಿರುವುದು ದೇಶದ ಪ್ರತಿಷ್ಠಿತ ಸಂಸ್ಥೆ ಝೀ ಸ್ಟುಡಿಯೋಸ್. ಈಗ ಪಿವಿಆರ್ ಸಿನಿಮಾಸ್ ಕೂಡಾ ಕೈಜೋಡಿಸಿದೆ. ಅಲ್ಲಿಗೆ ವಿಕ್ರಾಂತ್ ರೋಣನಿಗೆ 3ನೇ ಬಲ ಸಿಕ್ಕಿದೆ.
ವಿಕ್ರಾಂತ್ ರೋಣ ಫಿಕ್ಷನ್ ಸಿನಿಮಾ ಆಗಿದ್ದು, ಸುದೀಪ್ ಜೊತೆ ನಿರೂಪ್ ಭಂಡಾರಿ ಕೂಡಾ ಪ್ರಮುಖ ಪಾತ್ರದಲ್ಲಿದ್ದಾರೆ. ಜುಲೈ 28ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.