ಪುನೀತ್ ಹೀರೋ ಆಗಿ ನಟಿಸಿದ್ದ ಕೊನೆಯ ಸಿನಿಮಾ ಜೇಮ್ಸ್ ಮಾರ್ಚ್‍ನಲ್ಲಿ ರಿಲೀಸ್ ಆಗಿ ಸಕ್ಸಸ್ ಕಂಡಿತ್ತು. ಈಗ ಅಪ್ಪು ವಿಶೇಷ ಪಾತ್ರದಲ್ಲಿ ನಟಿಸಿದ್ದ ಲಕ್ಕಿ ಮ್ಯಾನ್ ರಿಲೀಸ್ ಆಗುವ ಸಮಯ. ಆಗಸ್ಟ್‍ನಲ್ಲಿ ಲಕ್ಕಿಮ್ಯಾನ್ ರಿಲೀಸ್ ಆಗುತ್ತಿದ್ದು, ಅಧಿಕೃತ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.
ಈ ಚಿತ್ರದಲ್ಲಿ ಪುನೀತ್ ದೇವರ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಭುದೇವ ಅವರೊಂದಿಗೆ ಸ್ಟೆಪ್ಸ್ ಹಾಕಿದ್ದಾರೆ. ಪ್ರಭುದೇವ ಅವರ ತಮ್ಮ ನಾಗೇಂದ್ರ ಪ್ರಸಾದ್ ನಿರ್ದೇಶನದ ಚಿತ್ರವಿದು.
ಲಕ್ಕಿಮ್ಯಾನ್ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಹೀರೋ. ಸಂಗೀತಾ ಶೃಂಗೇರಿ ಮತ್ತು ರೋಷನಿ ಪ್ರಕಾಶ್ ನಾಯಕಿಯರು. ತಮಿಳಿನ ಓ ಮೈ ಕಡವುಳೆ ಚಿತ್ರದ ರೀಮೇಕ್ ಇದು.