ನಟ ಕಿಚ್ಚ ಸುದೀಪ್ ಗೆ ಕೋವಿಡ್ ಪಾಸಿಟಿವ್ ಆಗಿದೆ. 2ನೇ ಬಾರಿ ಸುದೀಪ್ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಪಡೆದಿರುವ ಸುದೀಪ್, ವೈದ್ಯರ ಸಲಹೆಯಂತೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಪ್ರಸ್ತುತ ಸುದೀಪ್ ಅಭಿನಯದ ವಿಕ್ರಾಂತ್ ರೋಣ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಪ್ರಚಾರಕ್ಕಾಗಿ ಹೆಚ್ಚೂ ಕಡಿಮೆ ಇಡೀ ದೇಶ ಸುತ್ತಿದ್ದ ಸುದೀಪ್ ಸದ್ಯಕ್ಕೆ ರೆಸ್ಟ್ ಪಡೆಯುತ್ತಿದ್ದಾರೆ. ಅಭಿಮಾನಿಗಳು ಆತಂಕ ಪಡುವ ಯಾವುದೇ ವರದಿಗಳಿಲ್ಲ.