ನಿರ್ಮಾಪಕ ಜಾಕ್ ಮಂಜು ಕನ್ನಡ ಚಿತ್ರರಂಗದ ಪ್ರತಿಷ್ಠಿತ ವಿತರಕರೂ ಹೌದು. ಜಾಕ್ ಮಂಜು ಈಗ ಲಕ್ಕಿ ಮ್ಯಾನ್ ಚಿತ್ರದ ವಿತರಣೆಯ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. ವಿಕ್ರಾಂತ್ ರೋಣ ಭರ್ಜರಿ ಯಶಸ್ಸಿನ ಗುಂಗಿನಲ್ಲಿರುವ ಜಾಕ್ ಮಂಜು ಈಗ ಲಕ್ಕಿಮ್ಯಾನ್ ಚಿತ್ರವನ್ನು ರಿಲೀಸ್ ಮಾಡುತ್ತಿದ್ದಾರೆ. ಕರ್ನಾಟಕದ ವಿತರಣೆ ಹಕ್ಕು ಜಾಕ್ ಮಂಜು ಅವರದ್ದು.
ಲಕ್ಕಿ ಮ್ಯಾನ್ ಚಿತ್ರದಲ್ಲಿ ಪುನೀತ್ ದೇವರ ಪಾತ್ರದಲ್ಲಿ ನಟಿಸಿದ್ದಾರೆ. ಡಾರ್ಲಿಂಗ್ ಕೃಷ್ಣ ಹೀರೋ. ನಾಗೇಂದ್ರ ಪ್ರಸಾದ್ ನಿರ್ದೇಶನದ ಚಿತ್ರದಲ್ಲಿ ಪ್ರಭುದೇವ ಕೂಡಾ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಅಪ್ಪು-ಪ್ರಭುದೇವ ಡ್ಯಾನ್ಸ್ ಚಿತ್ರದ ಹೈಲೈಟ್. ಇದು ತಮಿಳಿನ ಓ ಮೈ ಕಡವುಳೆ ಚಿತ್ರದ ರೀಮೇಕ್.
ಡಾರ್ಲಿಂಗ್ ಕೃಷ್ಣ ಎದುರು 777 ಚಾರ್ಲಿ ಖ್ಯಾತಿಯ ಸಂಗೀತಾ ಶೃಂಗೇರಿ, ರೋಶಿನಿ ಪ್ರಕಾಶ್ ನಾಯಕಿಯರಾಗಿ ನಟಿಸಿದ್ದಾರೆ. ಪಿಆರ್ ಮೀನಾಕ್ಷಿ ಸುಂದರಂ ಮತ್ತು ಆರ್.ಸುಂದರ ಕಾಮರಾಜ್ ನಿರ್ಮಾಣದ ಚಿತ್ರ ಲಕ್ಕಿಮ್ಯಾನ್. ಸೆಪ್ಟೆಂಬರ್ 9ಕ್ಕೆ ರಿಲೀಸ್.