` ಸ್ವಾತಂತ್ರ್ಯ ಹೋರಾಟಗಾರನ ಮಗ ಭೂಗತ ನಾಯಕನಾಗುವ ಕಥೆ : ಕಬ್ಬ - chitraloka.com | Kannada Movie News, Reviews | Image

User Rating: 0 / 5

Star inactiveStar inactiveStar inactiveStar inactiveStar inactive
 
ಸ್ವಾತಂತ್ರ್ಯ ಹೋರಾಟಗಾರನ ಮಗ ಭೂಗತ ನಾಯಕನಾಗುವ ಕಥೆ : ಕಬ್ಬ
Kabza Movie Image

ಅಪ್ಪ ಸ್ವಾತಂತ್ರ್ಯ ಹೋರಾಟಗಾರ. ಅಮರೇಶ್ವರ. ಆತನ ಮಗ ಅರ್ಕೇಶ್ವರ, 1960-1984 ರ ಅವಧಿಯಲ್ಲಿ ಭಾರತದಲ್ಲಿ ಭೂಗತ ಜಗತ್ತಿನ ರಾಜನಾಗುವ ಕಥೆ ಕಬ್ಬ ಚಿತ್ರದ್ದು. ಡಾನ್ ಆಗುವುದಷ್ಟೇ ಅಲ್ಲ, ತನ್ನದೇ ಛಾಪನ್ನೂ ಮೂಡಿಸುವ ವ್ಯಕ್ತಿಯ ಕಥೆ ಕಬ್ಜ ಚಿತ್ರದಲ್ಲಿದೆ.

‘ಕಬ್ಜ’ ಚಿತ್ರದ ಬಗ್ಗೆ ಬರೀ ಕನ್ನಡವಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲೇ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ.

ಉಪೇಂದ್ರ ಮತ್ತು ‘ಕಿಚ್ಚ’ ಸುದೀಪ್ ಅಭಿನಯದ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ದ ಹಿಂದಿ ಅವತರಣಿಕೆಯ ಹಕ್ಕು ಗಳನ್ನು ಪ್ರತಿಷ್ಠಿತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಆನಂದ್ ಮೋಷನ್ ಪಿಕ್ಚರ್ಸ್ ಪಡೆದುಕೊಂಡಿದೆ. ಮೊದಲ ಹಂತವಾಗಿ ಹಿಂದಿ ಟೀಸರ್ ಬಿಡುಗಡೆಯಾಗಿದೆ.  ಶ್ರೀ ಸಿದ್ಧೇಶ್ವರ ಎಂಟರ್‍ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ‘ಕಬ್ಜ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಹಲವು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ.

ಭೂಗತಲೋಕದ ಹೊಸ ಅಧ್ಯಾಯವಾದ ಕಬ್ಜ ಚಿತ್ರೆದ ಹಿಂದಿ ಅವತರಣಿಕೆಯನ್ನು ಬಾಲಿವುಡ್ನ ಹೆಸರಾಂತ ನಿರ್ಮಾಪಕರಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಬಿಡುಗಡೆ ಮಾಡುತ್ತಿರುವುದು ತುಂಬಾ ಸಂತೋಷವಾಗಿದೆ. ಅವರ ಸಹಕಾರ ಹೀಗೆಯೇ ಮುಂದುವರೆಯಲಿ ಎಂದಿದ್ದಾರೆ ನಟ ಉಪೇಂದ್ರ. ಕಿಚ್ಚ ಸುದೀಪ್ ಸಹ ದಕ್ಷಿಣ ಭಾರತೀಯ ಸಿನಿಮಾಗಳು ಭಾರತೀಯ ಸಿನಿಮಾ ಎಂದು ಗುರುತಿಸಿಕೊಳ್ಳುತ್ತಿರುವ ಈ ಅದ್ಭುತ ಸಂದರ್ಭದಲ್ಲಿ ಖ್ಯಾತ ವಿತರಕ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ನಮ್ಮ ‘ಕಬ್ಜ’ ಸಿನಿಮಾವನ್ನು ಬಿಡುಗಡೆ ಮಾಡುತ್ತಿದೆ. ಇದು ಚಿತ್ರತಂಡದ ಕಠಿಣ ಪರಿಶ್ರಮಕ್ಕೆ ಸಿಕ್ಕ  ಪ್ರತಿಫಲ’ ಎಂದಿದ್ದಾರೆ.

‘ಕಬ್ಜ’ ಚಿತ್ರದ ವಿತರಣೆಯ ಹಕ್ಕುಗಳನ್ನು ಪಡೆದಿರುವ ಆನಂದ್ ಪಂಡಿತ್ ಮಾತನಾಡಿ, ಪ್ರೇಕ್ಷಕರ ಮನರಂಜಿಸುವುದೇ ನಮ್ಮ ಪ್ರಮುಖ ಉದ್ದೇಶ ಮತ್ತು ಕಬ್ಜ ಅಂತಹ ಒಂದು ಮನರಂಜನೆಯಾಗಲಿದೆ ಎಂದು ನಮಗೆ ಸಂಪೂರ್ಣ ನಂಬಿಕೆಯಿದೆ ಎಂದು ಹೇಳಿಕೊಂಡಿದ್ದಾರೆ.