ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ : ಯಾರಿಗೆಲ್ಲ ಪುರಸ್ಕಾರ..?
ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಗೆ ಚಿತ್ರರಂಗದಲ್ಲಿ ದೊಡ್ಡ ಮೌಲ್ಯ ಮತ್ತು ಗೌರವ ಇದೆ. 47 ವರ್ಷಗಳಿಂದ ಚಿತ್ರರಂಗದ ಜೊತೆ ಇರುವ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಕೊಡುತ್ತಿರುವ ಪ್ರಶಸ್ತಿ ಇದು. ಡಿ.ವಿ.ಸುಧೀಂದ್ರ ಅವರು ಸ್ಥಾಪಿಸಿದ್ದ ಈ ಪ್ರಶಸ್ತಿಗೆ ಈಗ 25 ವರ್ಷದ ಹರೆಯ. ಕೇವಲ 2 ಪ್ರಶಸ್ತಿಗಳಿಂದ ಶುರುವಾದ ಪ್ರಶಸ್ತಿ ಈಗ 11ಕ್ಕೆ ಹೆಚ್ಚಿದೆ. ನಿರ್ಮಾಪಕರು, ಪತ್ರಕರ್ತರು, ಕಲಾವಿದರು ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದೆ.
2021 ನೇ ಸಾಲಿನ ಪ್ರಶಸ್ತಿ :
ಪಿ. ಧನರಾಜ್, ಹಿರಿಯ ಚಲನಚಿತ್ರ ನಿರ್ಮಾಪಕರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ಈಶ್ಚರ ದೈತೋಟ, ಹಿರಿಯ ಪತ್ರಕರ್ತರು, (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
2022 ನೇ ಸಾಲಿನ ಪ್ರಶಸ್ತಿ :
ಕುಮಾರ್ ಗೋವಿಂದ್, ಹಿರಿಯ ನಟ-ನಿರ್ಮಾಪಕರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ಸದಾಶಿವ ಶೆಣೈ, ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು (ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ)
ರಾಜೇಶ್ ಕೃಷ್ಣನ್, ಖ್ಯಾತ ಹಿನ್ನೆಲೆ ಗಾಯಕರು (ಡಾ. ರಾಜಕುಮಾರ್ ಪ್ರಶಸ್ತಿ, ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ)
ಸಾಯಿಪ್ರಕಾಶ್, ಹಿರಿಯ ನಿರ್ದೇಶಕರು-ನಿರ್ಮಾಪಕರು (‘ಯಜಮಾನ’ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ್ ಅವರಿಂದ)
ತುಳಸಿ, ಹಿರಿಯ ನಟಿ (ಖ್ಯಾತ ಅಭಿನೇತ್ರಿ ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ)
ನೋಬಿನ್ ಪಾಲ್, ಅತ್ಯುತ್ತಮ ಸಂಗೀತ ನಿರ್ದೇಶನ, ‘777 ಚಾರ್ಲಿ’ ಚಿತ್ರಕ್ಕಾಗಿ (ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ ಲಿ ಪ್ರಶಸ್ತಿ)
ಮಧುಚಂದ್ರ, ಅತ್ಯುತ್ತಮ ಕಥಾಲೇಖಕರು, ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರಕ್ಕಾಗಿ (ಖ್ಯಾತ ನಿರ್ದೇಶಕ-ನಿರ್ಮಾಪಕ ಶ್ರೀ ಕೆ.ವಿ. ಜಯರಾಂ ಪ್ರಶಸ್ತಿ, ಶ್ರೀಮತಿ ಮೀನಾಕ್ಷಿ ಜಯರಾಂ ಅವರಿಂದ)
ಎಂ.ಜಿ. ಶ್ರೀನಿವಾಸ್ (ಶ್ರೀನಿ) ಅತ್ಯುತ್ತಮ ಸಂಭಾಷಣೆ, ‘ಓಲ್ಡ್ ಮಾಂಕ್’ ಚಿತ್ರಕ್ಕಾಗಿ (ಖ್ಯಾತ ಚಿತ್ರಸಾಹಿತಿ ಶ್ರೀ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ ಡಾ.ಎಚ್.ಕೆ. ನರಹರಿ ಅವರಿಂದ)
ಕಿರಣ್ ರಾಜ್ (‘777 ಚಾರ್ಲಿ’) ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ (ಹಿರಿತೆರೆ-ಕಿರುತೆರೆ ನಿರ್ದೇಶಕ ಶ್ರೀ ಬಿ. ಸುರೇಶ ಪ್ರಶಸ್ತಿ)
ಪ್ರಮೋದ್ ಮರವಂತೆ, ‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ …’ ಗೀತರಚನೆಗಾಗಿ (ಹಿರಿಯ ಪತ್ರಕರ್ತರಾದ ಶ್ರೀ.ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ಶ್ರೀ ವಿನಾಯಕರಾಮ್ ಕಲಗಾರು ಅವರಿಂದ)
ಶ್ರೀನಿವಾಸಮೂರ್ತಿ, ಹಿರಿಯ ಪೋಷಕ ಕಲಾವಿದರು (ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ, ಶ್ರೀಮತಿ ನಾಗಮಣಿ ಸೀತಾರಾಮ ಕುಟುಂಬದವರಿಂದ)
2021 ಹಾಗೂ 2022ನೇ ಸಾಲಿನ ಪ್ರಶಸ್ತಿ ವಿತರಣೆಯನ್ನು ಜನವರಿ 25ರಂದು ಚಾಮರಾಜಪೇಟೆಯಲ್ಲಿರುವ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಫಿಲಂ ಚೇಂಬರ್ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟಿಯರಾದ ರಾಗಿಣಿ, ಚಾಂದಿನಿ ಸೇರಿದಂತೆ ಚಿತ್ರೋದ್ಯಮದ ಗಣ್ಯರು ಭಾಗವಹಿಸಲಿದ್ದಾರೆ.