ಅಮೃತವರ್ಷಿಣಿ ಶರತ್`ಬಾಬು ಎಂದೇ ಕನ್ನಡದಲ್ಲಿ ಖ್ಯಾತಿ ಪಡೆದಿರುವ ನಟ ಶರತ್ ಬಾಬು ಮತ್ತೊಮ್ಮೆ ಅಸ್ವಸ್ಥರಾಗಿದ್ದಾರೆ. ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಇತ್ತೀಚೆಗಷ್ಟೇ ಶರತ್ ಬಾಬು ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಹೀಗಾಗಿ, ಬೆಂಗಳೂರಿನ ಆಸ್ಪತ್ರೆಗೆ ಶರತ್ ಬಾಬು ಅವರನ್ನು ದಾಖಲು ಮಾಡಲಾಗಿತ್ತು. ಆದರೆ ಶರತ್ ಬಾಬು ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ರಿಂದ ಕುಟುಂಬಸ್ಥರು ಶರತ್ ಬಾಬು ಅವರನ್ನು ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.
ಈಗ ಶರತ್ ಬಾಬು ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ. ಶರತ್ ಬಾಬು ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಶರತ್ ಬಾಬು ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಸಿನಿಮಾಗಳಲ್ಲಿ 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಕನ್ನಡದಲ್ಲಿ ಅಮೃತವರ್ಷಿಣಿ ಚಿತ್ರ ಶರತ್ ಬಾಬು ಅವರಿಗೆ ಅಪಾರ ಖ್ಯಾತಿ ತಂದುಕೊಟ್ಟಿತಾದರೂ, ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳಸಿದಳ, ರಣಚಂಡಿ, ಶಕ್ತಿ, ಹೃದಯ ಹೃದಯ, ನೀಲ, ನಮ್ಮೆಜಮಾನ್ರು, ಆರ್ಯನ್, ಜನುಮದಾತ, ಶ್ರೀಮಂಜುನಾಥ.. ಹೀಗೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.