ಬಘೀರ ಚಿತ್ರದ ಚಿತ್ರೀಕರಣ ವೇಳೆಯಲ್ಲೇ ಗಾಯಗೊಂಡಿದ್ದ ನಟ ಶ್ರೀಮುರಳಿ ಚೇತರಿಸಿಕೊಂಡಿದ್ದಾರೆ. ಬಘೀರ ಚಿತ್ರದ ಸೆಟ್ನಲ್ಲಿ ಗಾಯಗೊಂಡು ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶ್ರೀ ಮುರಳಿ ಅವರು ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ.
ಬಘೀರ. ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲಂಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ. ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ಪ್ರಶಾಂತ್ ನೀಲ್ ಮತ್ತು ಶ್ರೀಮುರಳಿ ಉಗ್ರಂ ನಂತರ ಮತ್ತೊಮ್ಮೆ ಅಫಿಷಿಯಲ್ಲಾಗಿ ಒಟ್ಟಾಗಿರುವ ಚಿತ್ರ ಬಘೀರ. ಹೀಗಾಗಿಯೇ ಚಿತ್ರದ ಮೇಲೆ ಭಾರಿ ನಿರೀಕ್ಷೆಯೂ ಇದೆ. ಬಹುಭಾಷಾ ಸಿನಿಮಾ ಬಘೀರದ ಭಾರಿ ನಿರೀಕ್ಷೆಗಳಿವೆ.
ಯಶ್ ಮತ್ತು ರಮ್ಯಾ ಅಭಿನಯದ ಲಕ್ಕಿ ಚಿತ್ರ ನಿರ್ದೇಶಿಸಿದ್ದ ಡಾ. ಸೂರಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಎಜೆ ಶೆಟ್ಟಿ ಅವರ ಛಾಯಾಗ್ರಹಣವಿದೆ. ಮೂರು ತಿಂಗಳ ವಿರಾಮದ ನಂತರ ನಟ ಈಗ ಸೆಟ್ಗೆ ಮರಳಿದ್ದಾರೆ ಮತ್ತು ಶ್ರೀ ಮುರಳಿ ಅವರು ಹಿರಿಯ ನಟ ಪ್ರಕಾಶ್ ರಾಜ್ ಅವರೊಂದಿಗೆ ಕೆಲವು ದೃಶ್ಯಗಳ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಶ್ರೀಮುರಳಿ ಎದುರು ರುಕ್ಮಿಣಿ ವಸಂತ್ ನಾಯಕಿಯಾಗಿದ್ದು, ಚಿತ್ರದಲ್ಲಿ ರಂಗಾಯಣ ರಘು, ಅಚ್ಯುತ್ , ಪುನೀತ್ ರುದ್ರನಾಗ್ ಮೊದಲಾದವರು ನಟಿಸಿದ್ದಾರೆ.